ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕಾಯುತ್ತಿರುವ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಇದೀಗ ಭರ್ಜರಿ ಅವಕಾಶ ದೊರೆತಿದೆ. ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR) ವತಿಯಿಂದ ವಿವಿಧ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 1,191 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. 10ನೇ ತರಗತಿ ಮತ್ತು ITI ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಪ್ರಕ್ರಿಯೆ ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್‌ಗಳಲ್ಲಿ ನಡೆಯಲಿದ್ದು, ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನವಿಲ್ಲದೆ ನೇರವಾಗಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಇದು ಉತ್ತಮ ಅವಕಾಶವಾಗಿದೆ.
ಹುದ್ದೆಗಳ ವಿವರ
- ಸಂಸ್ಥೆ: ದಕ್ಷಿಣ ಪೂರ್ವ ಮಧ್ಯ ರೈಲ್ವೆ (SECR)
- ಹುದ್ದೆಯ ಹೆಸರು: ಅಪ್ರೆಂಟಿಸ್ (Apprentice)
- ಒಟ್ಟು ಹುದ್ದೆಗಳು: 1,191
- ಉದ್ಯೋಗ ಸ್ಥಳ: ಬಿಲಾಸ್‌ಪುರ ಮತ್ತು ರಾಯ್‌ಪುರ ಡಿವಿಷನ್
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ಸಮಾನ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ NCVT ಅಥವಾ SCVT ಮಾನ್ಯತೆ ಪಡೆದ ITI ಪ್ರಮಾಣಪತ್ರ ಹೊಂದಿರಬೇಕು.
ವಯೋಮಿತಿ
- ಕನಿಷ್ಠ ವಯಸ್ಸು: 15 ವರ್ಷ
- ಗರಿಷ್ಠ ವಯಸ್ಸು: 24 ವರ್ಷ
ಸರ್ಕಾರದ ನಿಯಮಾನುಸಾರ SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅಭ್ಯರ್ಥಿಗಳ 10ನೇ ತರಗತಿ ಮತ್ತು ITI ಅಂಕಗಳ ಸರಾಸರಿಯನ್ನು ಆಧರಿಸಿ ಮೆರಿಟ್ ಪಟ್ಟಿ ತಯಾರಿಸಿ ನೇರ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಅಭ್ಯರ್ಥಿಗಳು ರೈಲ್ವೆಯ ಅಧಿಕೃತ ಅಪ್ರೆಂಟಿಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮೊದಲು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್, SSLC ಅಂಕಪಟ್ಟಿ, ITI ಪ್ರಮಾಣಪತ್ರ ಹಾಗೂ ಫೋಟೋಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಉತ್ತಮ.
ಪ್ರಮುಖ ಮಾಹಿತಿ
ಈ ಅಪ್ರೆಂಟಿಸ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ರೈಲ್ವೆಯ ಮುಂದಿನ ಕಾಯಂ ಉದ್ಯೋಗ ನೇಮಕಾತಿಯಲ್ಲಿ ಶೇ.20ರಷ್ಟು ಮೀಸಲಾತಿ ಹಾಗೂ ಆದ್ಯತೆ ದೊರೆಯುವ ಸಾಧ್ಯತೆ ಇದೆ. ಹೀಗಾಗಿ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ತಕ್ಷಣ ಅರ್ಜಿ ಸಲ್ಲಿಸುವುದು ಒ