ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಭರ್ಜರಿ ಅವಕಾಶ ದೊರಕಿದೆ. ಮಾರ್ಚ್ 23ರಂದು ಚಿಕ್ಕಮಗಳೂರಿನ ಐಡಿಎಸ್ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, 5000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ಒಂದೇ ಸ್ಥಳದಲ್ಲಿ ಇಷ್ಟು ದೊಡ್ಡ ಮಟ್ಟದ ಅವಕಾಶ ಸಿಗುತ್ತಿರುವುದು ಉದ್ಯೋಗಾರ್ಹರಿಗೆ ಸುವರ್ಣಾವಕಾಶವಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಈ ಮೇಳವನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಸಲಾಗುತ್ತದೆ.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. 18 ವರ್ಷ ಮೇಲ್ಪಟ್ಟವರು ತಮ್ಮ ರೆಸ್ಯೂಮ್ಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ವಿಶೇಷವಾಗಿ, ಸ್ಥಳದಲ್ಲೇ ಉದ್ಯೋಗ ನೀಡುವ ಅವಕಾಶವೂ ಇದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಬಯಸುವವರು ಮುಂಚಿತವಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವುದು ಅಗತ್ಯವಾಗಿದೆ. ಜೊತೆಗೆ, ಯುವನಿಧಿ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ ಹಾಜರಾಗಿ ಮಾರ್ಚ್ 2026ರ ಸ್ವಯಂ ಘೋಷಣೆಯನ್ನು ಸ್ಥಳದಲ್ಲೇ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ